ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲ್ಲಸಂದ್ರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ರುಚಿತಾ (25) ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿರುವ (Bengaluru) ಪ್ರಖ್ಯಾತ ಫಾರ್ಮಾ ಕಂಪನಿಯಲ್ಲಿ ರುಚಿತಾ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈಗ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.