Wednesday, February 28, 2024

ಕೋಲ್ಕತ್ತಾದ ಪ್ರೇಮಿಗಾಗಿ ಪಾಕಿಸ್ತಾನದಿಂದ ಬಂದ ಯುವತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮತ್ತೆ ಮತ್ತೆ ಸಾಬೀತಾಗುತ್ತಿದೆ ಅದೇನೆಂದರೆ ಪ್ರೀತಿಗೆ ಗಡಿಯಿಲ್ಲ ಮಾತು. ಇದಕ್ಕೆ ಇತ್ತೀಚಿನ ಉದಾಹರಣೆ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್‌ ಸುದ್ದಿ. ಅತ್ತ ಭಾರತದಿಂದ ಅಂಜು ಎಂಬಾಕೆ ಪಾಕಿಸ್ತಾನಕ್ಕೆ ಹೋಗಿ ಪ್ರಿಯಕರನ ಸೇರಿದಳು.

ಇದೀಗ ಅದೇ ರೀತಿ ಪಾಕಿಸ್ತಾನದ ಮಹಿಳೆಯೊಬ್ಬರು (Pakistan Women) ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ.
ಕರಾಚಿ ನಿವಾಸಿ ಜವೇರಿಯಾ ಖಾನುಮ್ ಅಮೃತಸರ ಜಿಲ್ಲೆಯ ಅಟ್ಟಾರಿಯಿಂದ ಭಾರತಕ್ಕೆ ಬಂದಿದ್ದಾರೆ. ಆಕೆ ವರ ಸಮೀರ್ ಖಾನ್‌ನನ್ನು ಸೇರಿದ್ದಾಳೆ. ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಬಂದಿದ್ದು, ಕೋಲ್ಕತ್ತಾ ನಿವಾಸಿ ಸಮೀರ್‌ನನ್ನು ಮುಂದಿನ ವರ್ಷದ ಜನವರಿಯಲ್ಲಿ ಮದುವೆಯಾಗಲಿದ್ದಾರೆ.

ಖಾನುಮ್‌ಗೆ 45 ದಿನಗಳ ವೀಸಾವನ್ನು ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕವು ಭಾರತಕ್ಕೆ ಬರುವ ಆಕೆಯ ಯೋಜನೆಗೆ ಐದು ವರ್ಷಗಳ ಕಾಲ ಅಡ್ಡಗಾಲಾಗಿತ್ತು. ಮುಂದಿನ ವರ್ಷ ಜನವರಿಯಲ್ಲಿ ನಾವು ಮದುವೆಯಾಗುತ್ತೇವೆ ಎಂದು ಮಾಧ್ಯಮಗಳಿಗೆ ಜೋಡಿ ಪ್ರತಿಕ್ರಿಯಿಸಿದೆ.

ನನಗೆ 45 ದಿನಗಳ ವೀಸಾ ನೀಡಲಾಗಿದೆ. ನಾನು ಇಲ್ಲಿಗೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ. ಆಗಮನದ ನಂತರ ನಾನು ಇಲ್ಲಿ ತುಂಬಾ ಪ್ರೀತಿಯನ್ನು ಪಡೆಯುತ್ತಿದ್ದೇನೆ. ಐದು ವರ್ಷದ ನಂತರ ನನಗೆ ವೀಸಾ ಸಿಕ್ಕಿದೆ. ಇದನ್ನು ನಂಬಲಾಗುತ್ತಿಲ್ಲ ಎಂದು ಖಾನುಮ್‌ ತಿಳಿಸಿದ್ದಾರೆ.

2018 ರ ಸಂದರ್ಭದಲ್ಲಿ ಆಕೆ ಮೇಲೆ ನನಗೆ ಪ್ರೀತಿಯಾಯಿತು. ಜರ್ಮನಿಯಲ್ಲಿ ಓದುತ್ತಿದ್ದ ನಾನು ಭಾರತಕ್ಕೆ ವಾಪಸ್‌ ಬಂದೆ. ನನ್ನ ತಾಯಿಯ ಫೋನ್‌ನಲ್ಲಿ ಅವಳ ಫೋಟೋವನ್ನು ನೋಡಿದೆ. ನಾನು ಜವೇರಿಯಾಳನ್ನು ಮದುವೆಯಾಗುತ್ತೇನೆಂದು ನನ್ನ ತಾಯಿಗೆ ಹೇಳಿದೆ ಎಂದು ಸಮೀರ್‌ ಖಾನ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!