ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನೂರಾರು ಜನರ ಮುಂದೆಯೇ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯರವಾಡದಲ್ಲಿ ನಡೆದಿದೆ.
ಹತ್ಯೆಯಾದ ಯುವತಿಯನ್ನು ಕತ್ರಜ್ ನಿವಾಸಿ ಶುಭದಾ ಶಂಕರ್ ಕೊಡಾರೆ (28) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಕೃಷ್ಣ ಸತ್ಯನಾರಾಯಣ್ ಕನೋಜ (30) ಎಂದು ಗುರುತಿಸಲಾಗಿದೆ.
ಇಬ್ಬರು ಒಂದೇ ಖಾಸಗಿ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕ ಯುವತಿ ನಡುವೆ ಪ್ರೀತಿ ಹಾಗೂ ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿದೆ. ಇದೇ ಕಾರಣಕ್ಕೆ ಆರೋಪಿ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ಯುವತಿಯನ್ನು ಸಾರ್ವಜನಿಕರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆ ಚಿಕಿತ್ಸೆ ಫಲಿಸಿದೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮಚ್ಚು ಎಸೆದ ತಕ್ಷಣ, ಜನರು ಆತನನ್ನು ಹಿಡಿದು, ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.