ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜನವರಿ 1ರಂದು ಮೆಜೆಸ್ಟಿಕ್ ನಿಲ್ದಾಣದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ವ್ಯಕ್ತಿ ಕಿರುಕುಳ ನೀಡಿದ್ದಾನೆ.
ಸಂತ್ರಸ್ತ ಯುವತಿ ನಮ್ಮ ಮೆಟ್ರೋ ಭದ್ರತಾ ಸಿಬ್ಬಂದಿಗೆ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೇ ವ್ಯಕ್ತಿಯ ವಿಚಾರಣೆ ನಡೆಸಿದ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ್ದಾಗಿ ಪೊಲೀಸರ ಮುಂದೆ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ. ಮತ್ತೊಮ್ಮೆ ಹೀಗೆ ಮಾಡುವುದಿಲ್ಲವೆಂದು ಆರೋಪಿ ಕ್ಷಮೆಯಾಚಿಸಿದ್ದಾನೆ ಎನ್ನಲಾಗಿದೆ.