ಹೊಸದಿಗಂತ ವರದಿ ಪುತ್ತೂರು:
ನಗರದ ಮಹಿಳಾ ಪೊಲೀಸ್ ಠಾಣೆ ಎದುರು ಇಂದು ಮಧ್ಯಾಹ್ನ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಡೆದಿದೆ.
ಯುವಕ ಯುವತಿಗೆ ಯಾವ ಕಾರಣಕ್ಕಾಗಿ ಚೂರಿಯಿಂದ ಇರಿದು ಪರಾರಿಯಾಗಿದ್ದ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಯುವತಿಯನ್ನು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.