ಹೊಸದಿಗಂತ ವರದಿ ಚಿಕ್ಕಮಗಳೂರು :
ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎನ್.ಆರ್.ಪುರ ತಾಲ್ಲೂಕಿನ ಬನ್ನೂರು ಬಳಿ ನಡೆದಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ(25) ಮೃತ ದುರ್ದೈವಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕೆಸಸ ಮಾಡುತ್ತಿದ್ದ ಅವರು ತೋಟದ ಲೈನ್ ಮನೆಯಲ್ಲಿ ವಾಸವಿದ್ದರು.
ಕೆಲಸ ಮುಗಿಸಿ ಕಳೆದ ರಾತ್ರಿ 9 ಗಂಟೆ ವೇಳೆಗೆ ಮನೆಗೆ ಹಿಂತಿರುಗುವಾಗ ಒಂಟಿ ಸಲಗ ದಾಳಿಮಾಡಿದೆ.
ತೀವ್ರ ಗಾಯಗೊಂಡಿದ್ದ ಅವರಿಗೆ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.