ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗೊಂದಲ ಬೇಡ, ಗಡು ನೀಡಿಲ್ಲ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಢೀಕರಣ ನೀಡಲು ಯಾವುದೇ ಗಡು ನಿಗದಿಪಡಿಸಿಲ್ಲ.

ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕು. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ. ಆದರೆ ಈ ದೃಢೀಕರಣ ನೀಡಲು ಕೇಂದ್ರ ಸರ್ಕಾರ ಯಾವುದೇ ಗಡು ವಿಧಿಸಿಲ್ಲ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಆಹಾರ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!