June 25, 2026
Thursday, June 25, 2026
spot_img

ಆಧಾರ್ ಕಾರ್ಡ್‌ ಬಗ್ಗೆ ಹರಿದಾಡಿದ ಸುದ್ದಿಗೆ ಸಿಕ್ತು ಸ್ಪಷ್ಟನೆ: ‘ನೋ ಚೇಂಜ್’ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಧಾರ್‌ ಕಾರ್ಡ್‌ನಲ್ಲಿ ದೊಡ್ಡ ಬದಲಾವಣೆ ತರಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ವರ್ಷದ ಅಂತ್ಯದೊಳಗೆ ಆಧಾರ್‌ ಕಾರ್ಡ್‌ನಲ್ಲಿ ಫೋಟೋ ಮತ್ತು ಕ್ಯೂಆರ್‌ ಕೋಡ್‌ ಮಾತ್ರ ಇರಲಿದೆ, ಹೆಸರು ಹಾಗೂ ವಿಳಾಸದ ಮಾಹಿತಿ ತೆಗೆದುಹಾಕಲಾಗುತ್ತದೆ ಎಂಬ ಮಾಹಿತಿ ಸಂಪೂರ್ಣ ಸುಳ್ಳು ಎಂದು ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ ತಿಳಿಸಿದೆ.

ಆಧಾರ್‌ ಕಾರ್ಡ್‌ ವಿನ್ಯಾಸ ಅಥವಾ ಮಾಹಿತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇಂತಹ ಸುಳ್ಳು ಸುದ್ದಿಗಳು ಜನರಲ್ಲಿ ಅನಗತ್ಯ ಗೊಂದಲ ಮತ್ತು ಆತಂಕ ಸೃಷ್ಟಿಸುತ್ತಿವೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರಿಶೀಲಿಸದ ಮಾಹಿತಿಯನ್ನು ನಂಬಬಾರದು ಎಂದು ಜನರಿಗೆ ಮನವಿ ಮಾಡಲಾಗಿದೆ. ಆಧಾರ್‌ಗೆ ಸಂಬಂಧಿಸಿದ ಅಧಿಕೃತ ಮಾಹಿತಿಗಾಗಿ UIDAI ಮತ್ತು PIB ಪ್ರಕಟಣೆಗಳನ್ನು ಮಾತ್ರ ಅವಲಂಬಿಸುವಂತೆ ಸೂಚಿಸಲಾಗಿದೆ.

ಇತ್ತೀಚೆಗೆ ಡೇಟಾ ಭದ್ರತೆ ಹೆಸರಿನಲ್ಲಿ ಆಧಾರ್‌ ಕಾರ್ಡ್‌ನಲ್ಲಿನ ವಿವರಗಳನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿ ಹರಡಿತ್ತು. ಆದರೆ ಈ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಸುಳ್ಳು ಸುದ್ದಿಗಳಿಗೆ ತೆರೆ ಎಳೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !