Tuesday, August 16, 2022

Latest Posts

ಇದು ಸತ್ಯ ಮತ್ತು ಅಸತ್ಯದ ನಡುವಿನ ಹೋರಾಟ-ಆದಿತ್ಯ ಠಾಕ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಪರಿಸ್ಥಿತಿಯು ಸತ್ಯ ಮತ್ತು ಅಸತ್ಯದ ನಡುವಿನ ಯುದ್ಧವಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ವ್ಯಾಖ್ಯಾನಿಸಿದ್ದಾರೆ. ಶನಿವಾರ ನಡೆದ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ನಂತರ ಆದಿತ್ಯ ಠಾಕ್ರೆ ಮಾಧ್ಯಮಗಳೊಂದಿಗೆ ಮಾತನಾಡಿ, “ಇದು ಸತ್ಯ ಮತ್ತು ಅಸತ್ಯದ ನಡುವಿನ ಹೋರಾಟ. ಬಂಡಾಯ ಶಾಸಕರ ವಿಶ್ವಾಸ ದ್ರೋಹ”ವನ್ನು ಎಂದಿಗೂ ಮರೆಯಲಾಗದು. ಈ ಹೋರಾಟದಲ್ಲಿ ಶಿವಸೇನೆ ಗೆಲುವು ಸಾಧಿಸಲಿದೆ ಎಂದರು.

ಶನಿವಾರ ನಡೆದ ಸಭೆಯಲ್ಲಿ ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಏಕನಾಥ್ ಶಿಂಧೆ ಜೊತೆಗೆ ಬಂಡಾಯ ಶಾಸಕರೆಲ್ಲರನ್ನೂ ಅನರ್ಹಗೊಳಿಸಲು ನಿರ್ಧರಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss