Friday, June 9, 2023

Latest Posts

ಶೀಘ್ರದಲ್ಲೇ ಅಂತರಾಷ್ಟ್ರೀಯ ಕಾರ್ಯಾಚರಣೆ ಆರಂಭಿಸಲಿದೆ ಆಕಾಶ ಏರ್‌ಲೈನ್ಸ್: ಸಾವಿರ ಸಿಬ್ಬಂದಿ ನೇಮಕಕ್ಕೆ ಪ್ಲ್ಯಾನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ದೇಶೀಯ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್‌ ತನ್ನ ವ್ಯಾಪಾರವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಯೋಜಿಸುತ್ತಿದ್ದು ಮುಂದಿನ ಒಂದು ವರ್ಷದ ಅವಧಿಯಲ್ಲಿ 1,000ಕ್ಕೂ ಅಧಿಕ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ. ಸುದ್ದಿ ಸಂಸ್ಥೆ ಪಿಟಿಐ ಗೆ ನೀಡಿದ ಸಂದರ್ಶನವೊಂದರಲ್ಲಿ ಆಕಾಶ ಏರ್‌ಲೈನ್ಸ್‌ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ವಿನಯ್ ದುಬೆ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು ಸಂಸ್ಥೆಯು ಹೊಸ ವಿಮಾನಯಾನ ಮಾರ್ಗಗಳನ್ನು ಆರಂಭಿಸಲು ಯೋಜಿಸುತ್ತಿದೆ. 2023ರ ಅಂತ್ಯದ ವೇಳೆಗೆ ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

2022ರ ಆಗಸ್ಟ್‌ ತಿಂಗಳಿನಲ್ಲಿ ಆರಂಭವಾದ ದೇಶೀಯ ವಿಮಾನಯಾನ ಸಂಸ್ಥೆ ಆಕಾಶ ಏರ್‌ ಮುಂದಿನ ದಿನಗಳಲ್ಲಿ ವ್ಯಾಪಕವಾಗಿ ವಿಸ್ತರಿಸಲು ಮುಂದಾಗಿದ್ದು 2024ರಹೊತ್ತಿಗೆ 1,000 ಜನರನ್ನು ನೇಮಿಸಿಕೊಳ್ಳುವ ಮೂಲಕ ಒಟ್ಟಾರೆ ಉದ್ಯೋಗಿಗಳ ಸಂಖ್ಯೆಯನ್ನು 3,00ಕ್ಕೆ ಏರಿಸಿಕೊಳ್ಳಲಿದೆ. ಅಲ್ಲದೇ ಕಾರ್ಯಾಚರಣೆಯನ್ನು ವಿಸ್ತರಿಸಲು ಬೋಯಿಂಗ್‌ 777 ಸೇರಿದಂತೆ ಮುಂದಿನ ದಿನಗಳಲ್ಲಿ 3 ಅಂಕಿಗಳ ಸಂಖ್ಯೆಯಲ್ಲಿ ವಿಮಾನ ಖರೀದಿ ನಡೆಸಲಿದೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!