ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಹಿಂಸಾಚಾರ ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಇತ್ತ ಇಂದು ಮಣಿಪುರದ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮೌನವಾಗಿದ್ದು, ಸಂಸತ್‌ನಲ್ಲಿ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಕಲಾಪಕ್ಕೂ ಮುನ್ನ ಸಂಸತ್ ಭವನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಮಲ್ಲಿಕಾರ್ಜುನ ಖರ್ಗೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.