ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಪ್ರಿಲ್ 14 ರಂದು ಆಮ್ ಆದ್ಮಿ ಪಕ್ಷ ದೇಶಾದ್ಯಂತ ‘ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ’ ದಿನ ಆಚರಿಸಲಿದೆ ಎಂದು ಎಎಪಿ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಅವರು ಶನಿವಾರ ಹೇಳಿದ್ದಾರೆ.
ನಾಳೆ ಪಕ್ಷದ ಕಾರ್ಯಕರ್ತರು ಸಂವಿಧಾನದ ಪೀಠಿಕೆಯನ್ನು ಓದುತ್ತಾರೆ ಮತ್ತು ಸಂವಿಧಾನ ಉಳಿಸುವ ಪ್ರತಿಜ್ಞೆ ಮಾಡಲಿದ್ದಾರೆ ಎಂದು ರೈ ತಿಳಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ. ಇದನ್ನು ಎದುರಿಸಲು ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.
ಭಾನುವಾರ, ನಾವು ಒಂದು ದಿನದ ಕಾರ್ಯಕ್ರಮವನ್ನು ನಡೆಸುತ್ತೇವೆ-‘ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ’ ದಿನ ಆಚರಿಸಲಾಗುವುದು. ಎಎಪಿ ಕಾರ್ಯಕರ್ತರು ತಮ್ಮ ರಾಜ್ಯಗಳಲ್ಲಿನ ಪಕ್ಷದ ಕಚೇರಿಗಳಲ್ಲಿ ಜಮಾಯಿಸಿ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಪ್ರತಿಜ್ಞೆ ಮಾಡಲಿದ್ದಾರೆ ಎಂದು ಅವರು ಹೇಳಿದರು.