ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ವಿಧಾನಸಭಾ ಚುನಾವಣೆ (Election) ಎಲ್ಲ ಪಕ್ಷಗಳು ಸಕಲ ಸಿದ್ಧತೆ ನಡೆಸುತ್ತಿದ್ದು,ಆಮ್ ಆದ್ಮಿ ಪಕ್ಷ (Aam Aadmi Party) ವು ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಲು ಕಸರತ್ತು ನಡೆಸುತ್ತಿದೆ.
ಇದೀಗ ಆಮ್ ಆದ್ಮಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 80 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಆಮ್ ಆದ್ಮಿ ಪಾರ್ಟಿ ರಿಲೀಸ್ ಮಾಡಿದೆ.
ಪಕ್ಷ ರಿಲೀಸ್ ಮಾಡಿರುವ ಪಟ್ಟಿಯಲ್ಲಿ ಏಳು ಜನ ರೈತ ಹೋರಾಟಗಾರರು. ಏಳು ಜನ ಮಹಿಳೆಯರು, 5 ಮಂದಿ ಸಮಾಜಸೇವಕರು, ಮೂರು ಜನ ಡಾಕ್ಟರೇಟ್, 15 ಜನ ಮಾಸ್ಟರ್ಸ್ ಮುಗಿಸಿರುವವರು , 3 ಜನ ಎಂಬಿಬಿಎಸ್ ಮುಗಿಸಿರುವವರು, 13 ಜನ ಲಾಯರ್ಸ್, ಪತ್ರಕರ್ತರು ಇದ್ದಾರೆ ಹಾಗೂ ಕಲಾವಿದರು ಇದ್ದಾರೆ.
ಹಲವು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ, ನೂರಾರು ಚಿತ್ರಗಳನ್ನು ಮಾಡಿರುವ ಟೆನ್ನಿಸ್ ಕೃಷ್ಣಗೆ (Tennis Krishna) ಆಮ್ ಆದ್ಮಿ ಪಾರ್ಟಿ ಟಿಕೆಟ್ ಘೋಷಣೆ ಮಾಡಿದ್ದು, ಇವರು ತುರುವೇಕರೆ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿದ್ದಾರೆ.
ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಹಲವಾರು ಚಿತ್ರಗಳನ್ನು ಮಾಡಿರುವ ಸ್ಮೈಲ್ ಶ್ರೀನು (Smile Srinu) (ಶ್ರೀನಿವಾಸ್ ಎನ್) (Srinivas N) ಅವರಿಗೆ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.