ಬಹುಕಾಲದ ಗೆಳೆಯನ ಜೊತೆ ಅಮೀರ್ ಖಾನ್ ಪುತ್ರಿ ಎಂಗೇಜ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುಕಾಲದ ಗೆಳೆಯ ನೂಪುರ್ ಶಿಖರೆ ಜೊತೆ ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮುಂಬೈನಲ್ಲಿ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಮುಂಬೈನಲ್ಲಿ ನಡೆದ ಈ ಸಮಾರಂಭದಲ್ಲಿ ಕೆಲ ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ತಮ್ಮ ಈ ಬಹುಕಾಲದ ಪ್ರೀತಿಗೆ ಎಂಗೇಜ್ ಆದರು.

ಅಮಿರ್ ಖಾನ್ ಮಾಜಿ ಪತ್ನಿ ಕಿರಣ್ ರಾವ್, ಅಳಿಯ ಇಮ್ರಾನ್ ಖಾನ್ ಹಾಗೂ ನಿರ್ದೇಶಕ ಅಶುತೋಷ್ ಗೌರೀಕರ್ ಹಾಗೂ ಕುಟುಂಬ ಸದಸ್ಯರು, ಸ್ನೇಹಿತರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಈ ವಿಶೇಷ ದಿನದಂದು ಇರಾ ಖಾನ್ ಕೆಂಪು ಬಣ್ಣದ ಉದ್ದನೆಯ ಗವನ್‌ನಲ್ಲಿ ಕಂಗೊಳಿಸುತ್ತಿದ್ದರು.ಇತ್ತ ಇರಾ ಬಾಯ್ಫ್ರೆಂಡ್ ನೂಪುರ್ ಶಿಖರೆ ಕಪ್ಪು ಬಣ್ಣದ ಟುಕ್ಸೆಡೊ ಸೂಟ್‌ನಲ್ಲಿ ಕಂಗೊಳಿಸುತ್ತಿದ್ದರು. ಇತ್ತ ನಟ ಅಮೀರ್ ಖಾನ್ ಕೂಡ ತನ್ನ ಮಗಳ ನಿಶ್ಚಿತಾರ್ಥದಲ್ಲಿ ಬಿಳಿ ಬಣ್ಣದ ಕುರ್ತಾ ಸೆಟ್‌ ಧರಿಸಿ ಸಾಲ್ಟ್ ಪೆಪ್ಪರ್‌ ಲುಕ್‌ನಲ್ಲಿ ಮಿಂಚುತ್ತಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!