Tuesday, July 5, 2022

Latest Posts

ರಾಜ್ಯ ಸಭೆಗೆ ಇಬ್ಬರು ಪದ್ಮಶ್ರೀ ಪುರಸ್ಕೃತರನ್ನು ಕಣಕ್ಕಿಳಿಸಿದ ಆಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಇಬ್ಬರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರನ್ನು ಆಮ್‌ ಆದ್ಮಿ ಪಕ್ಷವು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದೆ.

ಪಂಜಾಬ್‌ನ ಇಬ್ಬರು ರಾಜ್ಯಸಭಾ ಸದಸ್ಯರಾದ ಅಂಬಿಕಾ ಸೋನಿ (ಕಾಂಗ್ರೆಸ್) ಮತ್ತು ಬಲ್ವಿಂದರ್ ಸಿಂಗ್ ಭುಂದರ್ (ಶಿರೋಮಣಿ ಅಕಾಲಿ ದಳ) ಅವರ ಅವಧಿ ಜುಲೈನಲ್ಲಿ ಕೊನೆಗೊಳ್ಳಲಿದೆ. ಆ ಸ್ಥಾನಗಳಿಗೆ ಪದ್ಮಶ್ರೀ ಪುರಸ್ಕೃತರಾದ ಪರಿಸರ ಕಾರ್ಯಕರ್ತ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಮತ್ತು ಉದ್ಯಮಿ- ಸಾಮಾಜಿಕ ಕಾರ್ಯಕರ್ತ ವಿಕ್ರಮಜಿತ್ ಸಿಂಗ್ ಅವರನ್ನು ಆಮ್‌ ಆದ್ಮೀ ಪಕ್ಷದ ಪರವಾಗಿ ಕಣಕ್ಕಿಳಿಸಲಾಗಿದೆ. ಈ ಕುರಿತು ಟ್ವಿಟ್‌ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಇಬ್ಬರೂ ಅಭ್ಯರ್ಥಿಗಳಿಗೆ ಶುಭಾಶಯ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss