Wednesday, February 1, 2023

Latest Posts

ಆಮ್‌ ಆದ್ಮಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯಸಭಾ ಸದಸ್ಯ ಸಂದೀಪ್ ಪಾಠಕ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇತ್ತೀಚಿನ ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶಗಳ ನಂತರ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಅರ್ಹತೆ ಪಡೆದಿರುವ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳವಾರ ರಾಜ್ಯಸಭಾ ಸದಸ್ಯ ಸಂದೀಪ್ ಪಾಠಕ್ ಅವರನ್ನು ನೇಮಕ ಮಾಡಿದೆ. ಪಾಠಕ್ ಅವರು ಪಂಜಾಬ್ ಮತ್ತು ಗುಜರಾತ್‌ ಚುನಾವಣಾ ಉಸ್ತುವಾರಿಯಾಗಿದ್ದರು.
ಡಿಸೆಂಬರ್ 18ಕ್ಕೆ ನಿಗದಿಯಾಗಿರುವ ಎಎಪಿಯ ರಾಷ್ಟ್ರೀಯ ಕೌನ್ಸಿಲ್ ಸಭೆಗೂ ಮುನ್ನ ಈ ಘೋಷಣೆ ಹೊರಬಿದ್ದಿದೆ. ಸಭೆಯು ದೆಹಲಿಯ ಫಾರ್ಮ್‌ಹೌಸ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುಜರಾತ್, ಗೋವಾ, ಕರ್ನಾಟಕ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳ ಎಲ್ಲಾ 10 ರಾಜ್ಯಸಭಾ ಸಂಸದರು, ಶಾಸಕರು ಮತ್ತು ಪಕ್ಷದ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!