ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಕೇಜ್ರೀವಾಲ್‌

ಹೊಸದಿಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವು(ಎಎಪಿ) ಪೂರ್ಣಪ್ರಮಾಣದ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿಯೂ ಆಗಿರುವ ಅರವಿಂದ್‌ ಕೇಜ್ರೀವಾಲ್‌ ತಿಳಿಸಿದ್ದಾರೆ.

ಚುನಾವಣೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಎಪಿಯು ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ರಾಜಕೀಯ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಇಂಡಿಯಾ ಮೈತ್ರಿಕೂಟದೊಂದಿಗೆ ಅಥವಾ ಆಮ್‌ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ? ಎಂಬುವುದನ್ನು ಮುಂದಿನ ದಿನಗಳಲ್ಲಿ ಖಚಿತಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನವೆಂಬರ್ 7ರಂದು ಮಿಜೋರಾಂ, 7 ಮತ್ತು 17ರಂದು ಛತ್ತೀಸಗಢ, 17ರಂದು ಮಧ್ಯಪ್ರದೇಶ, 23ರಂದು ರಾಜಸ್ಥಾನ ಮತ್ತು 30ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಐದು ರಾಜ್ಯಗಳ ಪೈಕಿ ಛತ್ತೀಸಗಢದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಎಲ್ಲಾ ರಾಜ್ಯಗಳ ಮತ ಎಣಿಕೆ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!