May 26, 2026
Tuesday, May 26, 2026
spot_img

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ AAP ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷದಿಂದ ಬಿಜೆಪಿ ಸೇರ್ಪಡೆಗೊಂಡ ಏಳು ರಾಜ್ಯಸಭಾ ಸದಸ್ಯರ ವಿಚಾರ ರಾಷ್ಟ್ರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಪಕ್ಷದ ವಿರುದ್ಧ ನಡೆದುಕೊಂಡಿರುವ ಈ ಸಂಸದರನ್ನು ಅನರ್ಹಗೊಳಿಸುವಂತೆ ಆಮ್ ಆದ್ಮಿ ಪಕ್ಷ ಇದೀಗ ರಾಜ್ಯಸಭಾ ಅಧ್ಯಕ್ಷರು ಹಾಗೂ ಉಪರಾಷ್ಟ್ರಪತಿಗಳ ಬಳಿ ಅಧಿಕೃತ ಮನವಿ ಸಲ್ಲಿಸಿದೆ.

ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಸಂವಿಧಾನಾತ್ಮಕ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್, ಈ ಸಂಸದರು ಪಕ್ಷದ ಚಿಹ್ನೆ ಮತ್ತು ಬೆಂಬಲದ ಆಧಾರದಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ನಂತರ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರ್ಪಡೆಯಾಗಿರುವುದು ದಳಬದಲಾವಣೆ ವಿರೋಧಿ ಕಾನೂನಿನ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸದಸ್ಯತ್ವದ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಇತ್ತೀಚೆಗೆ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ನಾಯಕರ ವಾದವನ್ನು ಆಪ್ ತಳ್ಳಿಹಾಕಿದ್ದು, ಇದು ಕೇವಲ ರಾಜಕೀಯ ಕಾರಣಕ್ಕೆ ತೆಗೆದುಕೊಂಡ ನಿರ್ಧಾರವಲ್ಲ, ಜನರ ವಿಶ್ವಾಸಕ್ಕೆ ಮಾಡಿದ ದ್ರೋಹ ಎಂದು ಟೀಕಿಸಿದೆ. ಕಾನೂನು ತಜ್ಞರ ಸಲಹೆ ಪಡೆದು ಮನವಿ ಸಲ್ಲಿಸಿರುವುದಾಗಿ ಪಕ್ಷ ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !