ದೆಹಲಿ ಆಪ್‌ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಅತಿಶಿ ಮತ್ತು ಸೌರಭ್ ಭಾರದ್ವಾಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಇಂದು ದೆಹಲಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಮಂಗಳವಾರ ಅಂಗೀಕರಿಸಿದರು. ನಂತರ ನೂತನ ಸಚಿವರನ್ನಾಗಿ ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ನೇಮಕ ಮಾಡಲಾಗಿದೆ.

ಇಂದು ಸಂಜೆ 4:00 ಗಂಟೆಗೆ ದೆಹಲಿಯ ರಾಜ್ ನಿವಾಸ್‌ನಲ್ಲಿರುವ ಸಭಾಂಗಣದಲ್ಲಿ ನಿಯೋಜಿತ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!