ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಮೇ 13 ರಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಲಿವಾಲ್ ಬಂದಿದ್ದಾಗ ಅವರ ಮೇಲೆ ಹಲ್ಲೆ ನಡೆಸಿದ್ದರು.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಕುಮಾರ್ ಅವರನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದ್ದಾರೆ. ದೆಹಲಿ ಪೊಲೀಸರು ಕುಮಾರ್ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು.

ಸೋಮವಾರ, ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿತ್ತು. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ, ನಗರ ನ್ಯಾಯಾಲಯದ ತೀರ್ಪಿನ ವಿರುದ್ಧ ಬಿಭವ್ ಕುಮಾರ್ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ ಹಾಜರಾದ ಸ್ವಾತಿ ಮಲಿವಾಲ್ ಅವರು ತನಗೆ ಬೆದರಿಕೆಗಳು ಬರುತ್ತಿವೆ ಎಂದು ಜಾಮೀನು ಅರ್ಜಿಯನ್ನು ವಿರೋಧಿಸಿದರು. ವಿಚಾರಣೆ ವೇಳೆ ಅವರು ಕಣ್ಣೀರಿಟ್ಟಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!