ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್’ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಪೊಲೀಸರು ಮೇ 18 ರಂದು ಕುಮಾರ್ ಅವರನ್ನು ಬಂಧಿಸಿದ್ದರು.
ಕೇಜ್ರಿವಾಲ್ ಅವರ ಆಪ್ತ ಸಹಾಯಕ ಕುಮಾರ್ ಅವರು ಮೇ 13 ರಂದು ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.