ಹರಿಯಾಣದ 90 ವಿಧಾನಸಭಾ ಸ್ಥಾನಗಳಲ್ಲೂ ಎಎಪಿ ಸ್ಪರ್ಧಿಸಲಿದೆ: ಕೇಜ್ರಿವಾಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯನ್ನು ಇಂಡಿಯಾ ಬಣದ ಭಾಗವಾಗಿ ಎದುರಿಸಲಾಗುವುದು. ಆದರೆ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಲ್ಲಿ ತಮ್ಮ ಪಕ್ಷ (ಎಎಪಿ) ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಹರಿಯಾಣದ ಜಿಂದ್‌ನಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಂದು ಜನರು ಆಮ್ ಆದ್ಮಿ ಪಕ್ಷದ ಮೇಲೆ ಮಾತ್ರ ವಿಶ್ವಾಸ ಹೊಂದಿದ್ದಾರೆ. ಪಂಜಾಬ್ ಮತ್ತು ದೆಹಲಿಯಲ್ಲಿ ಜನರು ನಮ್ಮ ಸರ್ಕಾರವನ್ನು ನೋಡುತ್ತಿದ್ದಾರೆ. ಉತ್ತಮ ಆಡಳಿತದಿಂದ ಅಲ್ಲಿನ ಜನರು ಸಂತೋಷವಾಗಿದ್ದಾರೆ. ಈಗ ಹರಿಯಾಣ ದೊಡ್ಡ ಬದಲಾವಣೆ ಬಯಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!