ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಅರವಿಂದ್ ಕೇಜ್ರಿವಾಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.