ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂಡೀಗಢ ಮೇಯರ್ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಆಮ್ ಆದ್ಮಿ ಪಾರ್ಟಿಯ ಕುಲ್ದೀಪ್ ಮೇಯರ್ ಆಗಿ ಹೊರಹೊಮ್ಮಿದ್ದಾರೆ.
ಚಂಡೀಗಡ ಮೇಯರ್ ಚುನಾವಣೆಯಲ್ಲಿ 8 ಮತಗಳನ್ನು ಅಸಿಂಧು ಎಂದು ಘೋಷಿಸಿದ್ದ ರಿಟರ್ನಿಂಗ್ ಆಫೀಸರ್, ಬಿಜೆಪಿಯ ಮನೋಜ್ ಸೋಂಕರ್‌ಗೆ ಮೇಯರ್ ಪಟ್ಟ ಕಟ್ಟಿದ್ದರು. ಆದರೆ ಸುಪ್ರೀಂ ಕೋರ್ಟ್ 8 ಮತಗಳನ್ನು ಸಿಂಧುಗೊಳಿಸಿ ತೀರ್ಪು ಪ್ರಕಟಿಸಿದೆ. ಆಮ್ ಆದ್ಮಿಯ ಕುಲ್ದೀಪ್ ಮೇಯರ್ ಆಗಿ ಹೊರಹೊಮ್ಮಿದ್ದಾರೆ.
ಮತಪತ್ರ ತಿರುಚಿದ ಆರೋಪದ ಕುರಿತು ಇಂದು(ಮಂಗಳವಾರ) ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತಗಳನ್ನು ಮಾನ್ಯವೆಂದು ಪರಿಗಣಿಸಬೇಕು ಮತ್ತು ಮರುಎಣಿಕೆ ನಡೆಸಬೇಕು ಎಂದು ಹೇಳಿದೆ.
ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಕುಲದೀಪ್ ಕುಮಾರ್ ವಿರುದ್ಧ ಬಿಜೆಪಿ ಗೆಲುವು ಸಾಧಿಸಿತ್ತು. ಚುನಾವಣಾಧಿಕಾರಿಯು ಸಮ್ಮಿಶ್ರ ಪಾಲುದಾರರ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದ್ದರಿಂದ ಕುಲದೀಪ್ ಸೋತಿದ್ದರು. ಇದೀಗ ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತ ಅಸಿಂಧು ಅಲ್ಲ ಎಂದು ಹೇಳಿದ ನ್ಯಾಯಾಲಯ, ಎಎಪಿಯ ಕುಲದೀಪ್ ಕುಮಾರ್ ಅವರನ್ನು ಮೇಯರ್ ಎಂದು ಘೋಷಿಸಿದೆ.