ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರಕಾರ ಹಾಗು ದೆಹಲಿ ಸರಕಾರದ ನಡುವಿನ ಗುದ್ದಾಟ ಈಗ ಸುಪ್ರೀಕೋರ್ಟ್ ಅಂಗಳದಲ್ಲಿದ್ದು, ನಾಳೆ (ಜುಲೈ 4ರಂದು) ರಾಷ್ಟ್ರ ರಾಜಧಾನಿಯಲ್ಲಿ ಸೇವಾ ವಲಯದ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯ ಸಾಂವಿಧಾನಿ ಕತೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.
ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸುಪ್ರೀಂಕೋರ್ಟ್‌ನ ಆದೇಶ ಮತ್ತು ಸಂವಿಧಾನದ ಮೂಲ ರಚನೆಯನ್ನು ಅತಿಕ್ರಮಿಸುತ್ತದೆ. ಹೀಗಾಗಿ ಈ ಸುಗ್ರೀವಾಜ್ಞೆಗೆ ತಡೆಯಾಜ್ಞೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.
ಕೇಂದ್ರವು, ಮೇ 19ರಂದು ದೆಹಲಿ ಸೇವಾ ಆಡಳಿತದ ಪತ್ರಾಂಕಿತ ‘ಎ’ ಗುಂಪಿನ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಿದೆ.