ಅಬಾಯಾಗಿಲ್ಲ ಅವಕಾಶ: ವಿದ್ಯಾರ್ಥಿಗಳಿಗೆ ಫ್ರೆಂಚ್ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಅಬಯಾ ಡ್ರೆಸ್ (ಬುರ್ಖಾ) ಧರಿಸುವಂತಿಲ್ಲ ಎಂದು ಫ್ರೆಂಚ್ ಸರ್ಕಾರ ಸೂಚಿಸಿದೆ.
ಈ ಬಗ್ಗೆ ಮಾತನಾಡಿದ ಫ್ರೆಂಚ್ ಶಿಕ್ಷಣ ಸಚಿವ ಗ್ಯಾಬ್ರಿಯಲ್ ಅಟ್ಟಲ್, ಫ್ರಾನ್ಸ್‌ನ ಶಿಕ್ಷಣದಲ್ಲಿ ಕಟ್ಟುನಿಟ್ಟಾದ ಜಾತ್ಯತೀತ ಕಾನೂನುಗಳಿವೆ. ಈ ಉಡುಪು ಅವುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 4ರಿಂದ ಶಾಲೆಗಳು ಪುನಾರಾರಂಭಗೊಳ್ಳಲಿದೆ. ಹೀಗಾಗಿ ಎಲ್ಲಾ ಶಾಲಾ ಮುಖ್ಯಸ್ಥರಿಗೆ ಈ ಬಗ್ಗೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಶಾಲೆಗಳಲ್ಲಿ ಅಬಾಯಾಗಳನ್ನು ಧರಿಸುವುದರ ಕುರಿತ ದೀರ್ಘಕಾಲದ ಚರ್ಚೆಯ ನಂತರ ಕಾನೂನು ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!