ಮಠಾಧೀಶರು ತಲೆ ಮೇಲೆ ಬಟ್ಟೆ ಹಾಕುತ್ತಾರೆ, ಮುಸ್ಲಿಂ ಹೆಣ್ಣು ಮಕ್ಕಳು ಹಾಕಿದರೆ ತಪ್ಪೇನು: ಸಿದ್ದರಾಮಯ್ಯ

ಹೊಸದಿಗಂತ ವರದಿ, ಮೈಸೂರು:

ಮಠಾಧೀಶರು ತಮ್ಮ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ. ಆದರೆ ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಂಡರೆ ತಪ್ಪೇನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸುವ ಮೂಲಕ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪ್ಪಟ್ಟ ತಲೆ ಹಾಕಿ ಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ.? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ.?.
ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ. ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದ ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದು ಕೊಂಡಿದೆ. ಆದರೆ, ಜನ ಬುದ್ದಿವಂತರು, ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಮತ ಕ್ರೂಡೀಕರಣ ಆಗುತ್ತೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತೆ ನೋಡಿ ಎಂದು ಟಾಂಗ್ ನೀಡಿದರು.
ಪುತ್ರಿಗೆ ನಕಲಿ ಜಾತಿ ಪ್ರಮಾಣ ಪತ್ರ ಕೊಡಿಸಿ ಸರ್ಕಾರದ ಸವಲತ್ತು ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು,
ರೇಣುಕಾಚಾರ್ಯ ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕು. ರೇಣುಕಾಚಾರ್ಯ ಪ್ರಕರಣವನ್ನು ಸರ್ಕಾರ ಸಮರ್ಥಿಸುವುದು ಕಾನೂನು ಬಾಹಿರ ಕೆಲಸಕ್ಕೆ ಪ್ರೋತ್ಸಾಹ ಕೊಟ್ಟಂತೆ. ಜಂಗಮ ಸಮುದಾಯದ ರೇಣುಕಾಚಾರ್ಯ ತನ್ನ ಪುತ್ರಿಗೆ ಎಸ್ ಸಿ ಅಂತಾ ಪ್ರಮಾಣ ಪತ್ರ ಪಡೆದಿದ್ದನ್ನು ಸರ್ಕಾರ ಸಮರ್ಥಿಸಿದರೆ ಏನೂ ಮಾಡಬೇಕು ಹೇಳಿ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!