ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎ.ಬಿ.ಡಿ ವಿಲಿಯರ್ಸ್‌ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪುನರಾಗಮಿಸುವುದಿಲ್ಲ: ದಕ್ಷಿಣ ಆಫ್ರಿಕಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಎ.ಬಿ.ಡಿ ವಿಲಿಯರ್ಸ್‌ ಅವರು ನಿವೃತ್ತಿಯಿಂದ ಹೊರಬರುವುದಿಲ್ಲ. ಈ ವಿಷಯದಲ್ಲಿ ಮನಸ್ಸನ್ನು ಬದಲಾಯಿಸದಿರಲು ಅವರು ನಿರ್ಧರಿಸಿದ್ದಾರೆ ಎಂದು ಕ್ರಿಕೆಟ್‌ ದಕ್ಷಿಣ ಆಫ್ರಿಕ (ಸಿಎಸ್‌ಎ) ಮಂಗಳವಾರ ಪ್ರಕಟಿಸಿದೆ.
ಆ ಮೂಲಕ ಅವರ ಪುನರಾಗಮನದ ಕುರಿತು ಎದ್ದಿದ್ದ ವದಂತಿಗಳಿಗೆ ತೆರೆಬಿದ್ದಂತಾಗಿದ್ದು, ಎಬಿಡಿ ಜೊತೆ ಚರ್ಚೆ ಮುಗಿದಿದ್ದು, ಅವರು ತಮ್ಮ ನಿವೃತ್ತಿ ನಿರ್ಧಾರ ಅಂತಿಮ ಎಂದು ತಿಳಿಸಿದ್ದಾರೆ ಎಂದು ಸಿಎಸ್‌ಎ ಪ್ರಕಟಿಸಿದೆ.
ಆ ಮೂಲಕ ಮುಂಬರುವ ಟಿ-20 ವಿಶ್ವಕಪ್‌ನಲ್ಲಿ ಅವರು ಆಡುವುದಿಲ್ಲ ಎನ್ನುವುದು ಖಚಿತವಾಯಿತು. ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದ ನಂತರ ಸಿಎಸ್‌ಎ ಈ ಹೇಳಿಕೆ ನೀಡಿದೆಯೆನ್ನಲಾಗಿದೆ.
ಡಿ ವಿಲಿಯರ್ಸ್‌ ಅವರು 2018ರ ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 114 ಟೆಸ್ಟ್‌, 228 ಏಕದಿನ ಮತ್ತು 78 ಟ್ವೆಂಟಿ-20 ಪಂದ್ಯಗಳನ್ನು ಆಡಿದ್ದ ಡಿ ವಿಲಿಯರ್ಸ್‌, ಹಠಾತ್ತನೇ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss