ಅಲ್ಪಸಂಖ್ಯಾತರಿಗಾಗಿ ಅಬ್ದುಲ್ ಕಲಾಂ ವಸತಿ ಶಾಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲ್ಪಸಂಖ್ಯಾತರಿಗಾಗಿ ಅಬ್ದುಲ್ ಕಲಾಂ ವಸತಿ ಶಾಲೆ ಆರಂಭಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿವಿಧ ವಸತಿ ಶಾಳೆಗಳನ್ನು ಒಟ್ಟುಗೂಡಿಸಿ, ಅದಕ್ಕೆ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹೆಸರಿಟ್ಟು ಸಿಬಿಎಸ್‌ಇ ಮಾನ್ಯತೆ ಪಡೆಯಲು ಪ್ರಯತ್ನ ಮಾಡಲಾಗುತ್ತದೆ ಎಂದಿದ್ದಾರೆ.

ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳನ್ನು ಒಂದುಗೂಡಿಸಲಾಗುವುದು. ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್ ಹಾಗೂ ವಿಜ್ಞಾನ ಪ್ರಯೋಗಾಲಯಗಳನ್ನು ಒದಗಿಸಲಾಗುವುದು ಇದಕ್ಕಾಗಿ ೨೫ ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!