ಜೈಲಿನಲ್ಲಿದ್ದುಕೊಂಡೇ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ಅಬ್ದುಲ್ ರಷೀದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದ ಐದು ಸ್ಥಾನಗಳ ಪೈಕಿ ಬಿಜೆಪಿ ಎರಡು, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್) ಪಕ್ಷಗಳಿಗೆ ತಲಾ ಎರಡು ಸ್ಥಾನ ಸಿಕ್ಕಿವೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಜಯಿಸಿದ್ದಾರೆ.

ಇತ್ತ ಪಕ್ಷೇತರ ಅಭ್ಯರ್ಥಿಯೇ ಶೇಖ್ ಅಬ್ದುಲ್ ರಷೀದ್ ಜೈಲಿನಲ್ಲಿದ್ದುಕೊಂಡೇ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ. ಅದೂ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಅವರನ್ನೇ ಸೋಲಿಸಿದ್ದಾರೆ. ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ವಿರುದ್ಧ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಿಸಿದ್ದಾರೆ.

ಎಂಜಿನಿಯರ್ ರಷೀದ್ ಎಂದು ಹೆಸರಾಗಿರುವ ಶೇಖ್ ಅಬ್ದುಲ್ ರಷೀದ್ ಕಳೆದ ಐದು ವರ್ಷದಿಂದಲೂ ತಿಹಾರ್ ಜೈಲಿನಲ್ಲಿದ್ದಾರೆ. ಭಯೋತ್ಪಾದನೆಗೆ ಫಂಡಿಂಗ್ ವ್ಯವಸ್ಥೆ ಮಾಡಿರುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರು ಜೈಲಿನಲ್ಲಿದ್ದರೂ ಬಾರಾಮುಲ್ಲಾ ಕ್ಷೇತ್ರದಿಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಶೇಖ್ ಅಬ್ದುಲ್ ರಷೀದ್ ಅವರ ಪರವಾಗಿ ಪ್ರಚಾರ ನಡೆಸಿದವರು ಅವರ 22 ವರ್ಷದ ಮಗ ಅಬ್ರಾರ್ ರಷೀದ್. ಅವರ ಪ್ರಕಾರ ಸಾವಿರಾರು ಜನರು ಕಾರ್ಯಕರ್ತರಾಗಿ ಬಂದು ತಮ್ಮ ತಂದೆಯ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ವಾಹನಕ್ಕೆ ಪೆಟ್ರೋಲ್ ತುಂಬಿಸಲು 27,000 ರೂ ಖರ್ಚಾಗಿದ್ದು ಬಿಟ್ಟರೆ ತಮ್ಮ ಕೈಯಿಂದ ಬೇರೆ ಯಾವ ವೆಚ್ಚವೂ ಆಗಿಲ್ಲ ಎನ್ನುತ್ತಾರೆ ಅಬ್ರಾರ್.

ತಮ್ಮ ತಂದೆ ಈ ಚುನಾವಣೆಯಲ್ಲಿ ಅಭೂತಪೂರ್ವ ರೀತಿಯಲ್ಲಿ ಗೆಲುವು ಸಾಧಿಸಿರುವುದು ಅವರು ನಿರ್ದೋಷಿ ಎಂಬುದನ್ನು ತೋರಿಸುತ್ತದೆ. ಸರ್ಕಾರ ಕೂಡಲೇ ತಮ್ಮ ತಂದೆಯನ್ನು ಬಿಡುಗಡೆ ಮಾಡಬೇಕು ಎಂದು ಅಬ್ರಾರ್ ರಷೀದ್ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!