ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ ನಂತರ ಸಿದ್ದರಾಮಯ್ಯಗೆ ಸಕಷ್ಟ ಹೆಚ್ಚಾಯಿತು. ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು ಮತ್ತು ಚರ್ಚಿಸಿ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಇದೇ ವೇಳೆ ಎಐಸಿಸಿ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಧೈರ್ಯ ತುಂಬಿದರು.
ಸಿದ್ದರಾಮಯ್ಯನವರಿಗೆ ಕರೆ ಮಾಡಿರುವ ಹೈಕಮಾಂಡ್ ನಾಯಕರು ಭಯಪಡುವ ಅಗತ್ಯವಿಲ್ಲ. ಧೈರ್ಯವಾಗಿರಿ ಎಂದಿದ್ದಾರೆ. ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಪ್ರಮುಖ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ನಾವು ನಿಮ್ಮ ಪರವಾಗಿಯೇ ಇದ್ದೇವೆ, ಯಾವುದೇ ಬೆಲೆ ತೆತ್ತಾದರೂ ಹೋರಾಟ ಮಾಡುತ್ತೇವೆ ಎಂದು ಅಭಯ ನೀಡಿದ್ದಾರೆ.
ರಾಜ್ಯಪಾಲರ ಅನುಮತಿ ವಿರೋಧಿಸಿ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಲು ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ. ಇದೇ ವೇಳೆ ರಾಜಭವನ ಚಲೋ ನಡೆಸಲು ಸಚಿವರು ಸಿದ್ಧತೆ ನಡೆಸುತ್ತಿದ್ದಾರೆ.