ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಪ್ರಯಾಣ ನನ್ನ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಮುಂದಿನ ಭಾನುವಾರ ಬಿಗ್ಬಾಸ್ 11 ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ನಾನು ಹನ್ನೊಂದು ಸೀಸನ್ಗಳಿಂದ ಬಿಗ್ ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ನನಗೆ ತೋರಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫಿನಾಲೆ ನನ್ನ ಕೊನೆಯ ನಿರೂಪಣೆಯಾಗಿರುತ್ತದೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ ಎಂದರು.
ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.