ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಟ ಅಭಿಷೇಕ್ ಅಂಬರೀಶ್-ಅವಿವಾ (Aviva) ಜೋಡಿಯ ಆರತಕ್ಷತೆಗೆ (Reception) ಶುರುವಾಗಿದೆ.
ದುಬಾರಿ ಕಾರಿನಲ್ಲಿ ಅರಮನೆ ಮೈದಾನಕ್ಕೆ ಬಂದಿಳಿದ ಅಭಿ (Abhishek Ambarish) ಹಾಗೂ ಅವಿವಾ ಆರತಕ್ಷತೆ ಕಾರ್ಯಕ್ರಮಕ್ಕೆ ತಯಾರಾದ ವೇದಿಕೆಯತ್ತ ಹೆಜ್ಜೆ ಹಾಕಿದ್ದಾರೆ.
ಅಭಿ ಗೋಲ್ಡನ್ ಶೇರ್ವಾನಿ ಧರಿಸಿದ್ದರೆ, ಅವಿವಾ ಗೋಲ್ಡನ್ ಕಲರ್ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಅದ್ದೂರಿ ಆರತಕ್ಷತೆಗಾಗಿ ಅರಮನೆ ಮೈದಾನ ಸಿಂಗಾರಗೊಂಡಿದೆ.
ಎರಡು ದಿನಗಳ ಹಿಂದೆಯಷ್ಟೇ ನಡೆದ ಮದುವೆ ಸಮಾರಂಭದಲ್ಲಿ ನಟರಾದ ರಜನಿಕಾಂತ್, ಸುದೀಪ್, ಯಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಆಗಮಿಸಿದ್ದರು.
ಇಂದು ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬಾಲಿವುಡ್ ನ ಖ್ಯಾತ ನಟ ಅಮಿತಾಭ್, ತೆಲುಗಿನ ಖ್ಯಾತ ನಟ ಚಿರಂಜೀವಿ, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವು ಸಚಿವರು ಭಾಗಿಯಾಗುವ ನಿರೀಕ್ಷೆಯಿದೆ.