Tuesday, June 28, 2022

Latest Posts

ಶೂಟಿಂಗ್ ವೇಳೆ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಗೆ ಗಾಯ: ಆಸ್ಪತ್ರೆಗೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೈ ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮಿಳಿನ ‘ಓಟು ಸೇರಪ್ಪು ಸೈಜ್ 7’ ಸಿನಿಮಾ ಹಿಂದಿಗೆ ರಿಮೇಕ್ ಮಾಡಲಾಗುತ್ತಿದ್ದು, ಚಿತ್ರೀಕರಣದ ವೇಳೆ ಅಭೀಷೇಕ್ ಕೈಗೆ ಗಾಯವಾಗಿದೆ. ಕೂಡಲೇ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಭಿಷೇಕ್ ಅವರ ಆರೋಗ್ಯ ವಿಚಾರಿಸಲು ತಂದೆ ಅಮಿತಾಬ್ ಬಚ್ಚನ್ ಹಾಗೂ ಸೋದರಿ ಶ್ವೇತಾ ಬಚ್ಚನ್ ನಂಡಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಪತ್ನಿ ಐಶ್ವರ್ಯ ರೈ ಕೂಡ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಪತಿಗೆ ಗಾಯವಾದ ಸುದ್ದಿ ತಿಳಿಯುತ್ತಿದ್ದಂತೆ ಮುಂಬೈ ಗೆ ವಾಪಾಸಾಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಅಭಿಷೇಕ್ ಬಚ್ಚನ್ ಅವರ ಆರೋಗ್ಯದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss