Wednesday, June 29, 2022

Latest Posts

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್​ ಬ್ಯಾನರ್ಜಿ ದಂಪತಿಗೆ ಇಡಿ ಸಮನ್ಸ್​

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಲ್ಲಿದ್ದಲು ಕಳ್ಳಸಾಗಣೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಟಿಎಂಸಿ ಸಂಸದ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಹಾಗೂ ಅವರ ಪತ್ನಿ ರುಜಿರಾ ಬ್ಯಾನರ್ಜಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ರುಜಿರಾ ಬ್ಯಾನರ್ಜಿಗೆ ಸೆಪ್ಟೆಂಬರ್ 1 ರಂದು, ಅಭಿಷೇಕ್ ಬ್ಯಾನರ್ಜಿಗೆ ಸೆಪ್ಟೆಂಬರ್​ 6 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಬ್ಯಾನರ್ಜಿ ಪರ ವಕೀಲ ಸಂಜಯ್ ಬಸುಗೆ ಸೆಪ್ಟೆಂಬರ್ 3 ರಂದು ಇಡಿ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ.
ಪೊಲೀಸ್ ಅಧಿಕಾರಿಗಳಿಗೂ ಸಮನ್ಸ್​​ಪಶ್ಚಿಮ ಬಂಗಾಳದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಶ್ಯಾಮ್​ ಸಿಂಗ್​ಗೆ ಸೆಪ್ಟೆಂಬರ್ 8, ಜ್ಞಾನವಂತ ಸಿಂಗ್​ಗೆ ಸೆಪ್ಟೆಂಬರ್​ 9 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸಿಬಿಐ ದಾಖಲಿಸಿರುವ ಎಫ್​​ಐಆರ್​ ಗಮನಿಸಿದ ಇಡಿ, ಈ ಕ್ರಮ ಕೈಗೊಂಡಿದೆ. ಅಲ್ಲದೆ ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ತನಿಖೆ ನಡೆಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss