ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಯುವ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಶತಕ ಸಿಡಿಸಿದ್ದಾರೆ.
ಟೀಮ್ ಇಂಡಿಯಾ ಪರ ಓಪನರ್ ಆಗಿ ಬಂದ ಯುವ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ 37 ಎಸೆತಗಳಲ್ಲಿ ತಮ್ಮ ಟಿ20 ವೃತ್ತಿಜೀವನದ ಎರಡನೇ ಶತಕವನ್ನು ಸಿಡಿಸಿದ್ದಾರೆ. ಅಭಿ ಅವರ ಈ ಶತಕದ ಇನ್ನಿಂಗ್ಸ್ನಲ್ಲಿ 5 ಬೌಂಡರಿ ಹಾಗೂ 10 ಸಿಕ್ಸರ್ ಕೂಡ ಸೇರಿವೆ.
ಭಾರತ, ಇಂಗ್ಲೆಂಡ್ ನಡುವಿನ ಕೊನೆಯ ಟಿ20 ಪಂದ್ಯ ಭಾರೀ ಕುತೂಹಲ ಹುಟ್ಟು ಹಾಕಿದೆ. ಈಗಾಗಲೇ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದಿದೆ. 3-1 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ ಟೀಮ್ ಇಂಡಿಯಾಗೆ ಇದು ಔಪಚಾರಿಕ ಪಂದ್ಯ ಆಗಿದ್ದು, ಇಂಗ್ಲೆಂಡ್ ಮಾತ್ರ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇಂಗ್ಲೆಂಡ್ ತಂಡಕ್ಕೆ ಇದು ಪ್ರತಿಷ್ಠೆ ಕಣವಾಗಿದೆ.