ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಮತ್ತೆ ಸ್ಫೋಟಕ ಅರ್ಧಶತಕ ಬಾರಿಸಿದ್ದು, ಭಾರತ 6 ವಿಕೆಟ್ ನಷ್ಟಕ್ಕೆ 168 ರನ್ ಹೊಡೆದಿದೆ.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಭಾರತದ ಆರಂಭ ಉತ್ತಮವಾಗಿತ್ತು. ಗಿಲ್ ಮತ್ತು ಅಭಿಷೇಕ್ ಶರ್ಮಾ 38 ಎಸೆತಗಳಲ್ಲಿ 77 ರನ್ ಜೊತೆಯಾಟವಾಡಿದರು. ಗಿಲ್ 29 ರನ್(19 ಎಸೆತ, 2 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟಾದರು. ಗಿಲ್ ಔಟಾದ ಬೆನ್ನಲ್ಲೇ ಶಿವಂ ದುಬೆ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಎರಡು ವಿಕೆಟ್ ಪತನಗೊಂಡರೂ ಮತ್ತೊಂದು ಕಡೆ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟ್ ಬೀಸಿದರು. ಸಿಕ್ಸರ್ ಬೌಂಡರಿ ಸಿಡಿಸಿದ ಅಭಿಷೇಕ್ ಶರ್ಮಾ 75 ರನ್( 37 ಎಸೆತ, 6 ಬೌಂಡರಿ, 5 ಸಿಕ್ಸರ್) ರನೌಟ್ ಆದರು.
ಸೂರ್ಯಕುಮಾರ್ ಯಾದವ್ 5ರನ್, ತಿಲಕ್ ವರ್ಮಾ 5 ರನ್ ಗಳಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ 34 ಎಸೆತಗಳಲ್ಲಿ 39 ರನ್ ಹೊಡೆದರು. ಪಾಂಡ್ಯ 38 ರನ್(29 ಎಸೆತ, 4 ಬೌಂಡರಿ, 1 ಸಿಕ್ಸ್) ಹೊಡೆದು ಔಟಾದರೆ ಅಕ್ಷರ್ ಪಟೇಲ್ ಔಟಾಗದೇ 10 ರನ್ ಹೊಡೆದರು.