ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಂಡ್ಯ:
ಈ ಮಣ್ಣಿನ ತಿಲಕವನ್ನು ಹಚ್ಚಿ ಅಂಬರೀಶ್ ಅವರನ್ನು ಕಳುಹಿಸಿಕೊಟ್ಟಿದ್ದೇವೆ. ಇದೇ ಮಣ್ಣಿನಲ್ಲಿ ವಾಸ ಮಾಡಬೇಕು ಎನ್ನುವುದು ನನ್ನ ಮತ್ತು ಅಭಿಷೇಕ್ ಆಸೆಯಾಗಿದೆ. ಅದು ಈಗ ಕಾರ್ಯರೂಪಕ್ಕೆ ಬಂದಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನೂತನ ಮನೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಲೋಕಸಭೆ ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ನೆಲೆಸುವುದಾಗಿ ಜನರಿಗೆ ಮಾತು ಕೊಟ್ಟಿದ್ದೆ. ಅದಕ್ಕಾಗಿ ಸೂಕ್ತವಾದ ಜಾಗಕ್ಕಾಗಿ ಹುಡುಕಾಟ ನಡೆಸಿದ್ದೆವು. ಹನಕೆರೆ ಬಳಿ ಶಶಿಕುಮಾರ್ ಅವರ ಜಾಗವೇ ಇರುವುದು ಗೊತಾಯಿತು. ಅದನ್ನು ಪಡೆದುಕೊಂಡಿದ್ದೇವೆ. ಈ ಜಾಗ ಮನಸ್ಸಿಗೆ ಸಂತೋಷ, ಸಮಾಧಾನ ತಂದಿದೆ ಎಂದು ಹೇಳಿದರು.
ಮುಂದಿನ 9 ರಿಂದ 10 ತಿಂಗಳೊಳಗೆ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕೆಂಬ ನಿರೀಕ್ಷೆಯಲ್ಲಿದ್ದೇವೆ. ಅತ್ಯಂತ ಸರಳವಾಗಿ ಮನೆಯನ್ನು ನಿರ್ಮಾಣ ಮಾಡಲಿದ್ದೇವೆ. ಈ ಜಾಗ ಮಂಡ್ಯ ಹಾಗೂ ಮದ್ದೂರಿಗೆ ಹತ್ತಿರವಾಗಲಿದೆ. ಜನರೂ ಬಂದು ಹೋಗುವುದಕ್ಕೆ ಅನುಕೂಲವಾಗುವುದೆಂಬ ಕಾರಣಕ್ಕೆ ಇಲ್ಲಿ ಮನೆ ನಿರ್ಮಿಸುತ್ತಿದ್ದೇವೆ ಎಂದರು.