‘ಅಬ್ಕಿ ಬಾರ್ 400 ಪಾರ್’: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಮಾತಿಗೆ ನಕ್ಕ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ ಅಧಿವೇಶನದ ವೇಳೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಉಲ್ಲೇಖಿಸಿ ‘ಅಬ್ಕಿ ಬಾರ್, 400 ಪಾರ್’ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನು ಕೇಳಿ ಆಡಳಿತಾರೂಢ ಬಿಜೆಪಿ (BJP) ಸದಸ್ಯರು ಜೋರಾಗಿ ಚಪ್ಪಾಳೆ ತಟ್ಟಿದ್ದು ಸಂಸತ್ ಭವನದ ಆವರಣ ನಗೆಗಡಲಲ್ಲಿ ಮುಳುಗಿತು.

ಸಂಸತ್ತಿನಲ್ಲಿ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ , “ನಿಮಗೆ ಇಷ್ಟು ಬಹುಮತವಿದೆ.ಮೊದಲು ಅವರು 330-334 ಸ್ಥಾನಗಳ ಬಗ್ಗೆ ಮಾತನಾಡುತ್ತಿದ್ದರು, ಈಗ ಅದು 400 ದಾಟುತ್ತಿದೆ. ಅರೇ 400 ದಾಟಲಿದೆ, ಆರಿಸಿ ಅವರೆಲ್ಲ ಬರಲಿ ಎಂದು ಹೇಳಿದ್ದಾರೆ.

ಖರ್ಗೆ ಈ ರೀತಿ ಹೇಳುವುದನ್ನು ಕೇಳಿ ಸಭಾಪತಿ ಜಗದೀಪ್ ಧನ್ಖರ್ ಕೂಡಾ ನಕ್ಕಿದ್ದಾರೆ. ವಿಶೇಷವೆಂದರೆ ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ಖರ್ಗೆಯವರ ‘400 ಪಾರ್’ ಕೇಳಿದ ನಂತರ ಪ್ರಧಾನಿ ಮೋದಿ ನಗಲು ಆರಂಭಿಸಿದರು. ಈ ವೇಳೆ ಆಡಳಿತ ಪಕ್ಷದ ಸಂಸದರು ಮೇಜು ಕುಟ್ಟಿ, ಚಪ್ಪಾಳೆ ತಟ್ಟಿ ಘೋಷಣೆ ಕೂಗಿದರು.

ಈ ಮೂಲಕ 2024ರ ಲೋಕಸಭೆ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. ಎಂದು ಕಾಂಗ್ರೆಸ್ ಅಧ್ಯಕ್ಷರೇ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ 400 ದಾಟುತ್ತಿದೆ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿಕಟವರ್ತಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಖರ್ಗೆಯವರ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಂಡವರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!