ಅಸಹಜ ಲೈಂಗಿಕ ಕೇಸ್ ಸಿಐಡಿಗೆ ಹಸ್ತಾಂತರ: ಸೂರಜ್ ರೇವಣ್ಣನನ್ನು ಬೆಂಗಳೂರಿಗೆ ಕರೆತಂದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಹೊಳೆರರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣರನ್ನು ಇಂದು ಹಾಸನದಿಂದ ಬೆಂಗಳೂರಿಗೆ ಕರೆತರಲಾಯಿತು.

ಈಗಾಗಲೇ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ತನಿಖೆಗೆ ವಹಿಸಿದೆ . ಹೀಗಾಗಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಹೊಳೆನರಸಿಪುರ ಗ್ರಾಮಾಂತರ ಠಾಣೆಯಿಂದ ಸಿಐಡಿಗೆ ವರ್ಗಾವಣೆ ಮಾಡಿ ಲಾ ಅಂಡ್ ಆರ್ಡರ್ ಎಡಿಜಿಪಿ ಹೀತೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನವೇ ಸಿಐಡಿ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ. ಹಾಸನಕ್ಕೆ ತೆರಳಿ ಸಿಐಡಿ ಪೊಲೀಸರು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಮುಂದಿನ ತನಿಖೆ ಸಿಐಡಿ ತಂಡ ನಡೆಸಲಿದೆ.

ಇಂದು ಸಾಯಂಕಾಲ ಸೂರಜ್ ರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೂನ್ 16ರಂದು ಹೊಳೆನರಸೀಪುರ ಹೊರವಲಯದಲ್ಲಿರುವ ಗನ್ನಿಕಡದ ತೋಟದ ಮನೆಗೆ ತನ್ನನ್ನು ಕರೆಸಿಕೊಂಡ ಸೂರಜ್ ತನ್ನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರೀಡೆ ನಡೆಸಿದರು ಎಂದು ಸಂತ್ರಸ್ತ ಯುವಕ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾನೆ ಮತ್ತು ದೂರಿನ ಮೇರೆಗೆ ಸೂರಜ್ ರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!