ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.
2 ವರ್ಷಗಳ ಹಿಂದೆ ಹಿಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ತಂದಿತ್ತು, ಇದರಲ್ಲಿ ಹಲವು ನ್ಯೂನತೆಗಳು ಇದೆ. ಹೀಗಾಗಿ ಅದನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ’ ಜಾರಿಗೆ ತರುತ್ತೇವೆ ಎಂದರು.
ಈ ಬಗ್ಗೆಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ತೀರ್ಮಾನಕ್ಕೆ ಬರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.