ಎನ್‌ಇಇಟಿ ಯನ್ನು ರದ್ದು ಮಾಡಿ, ರಾಜ್ಯಗಳೇ ಪರೀಕ್ಷೆ ನಡೆಸಲಿ: ಪ್ರಧಾನಿ ಮೋದಿಗೆ ಸಿಎಂ ಮಮತಾ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್‌ಇಇಟಿ – ನೀಟ್‌) ರದ್ದುಮಾಡಬೇಕು. ರಾಜ್ಯಗಳೇ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಅವರು, ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರಗಳೇ ಪರೀಕ್ಷೆಗಳನ್ನು ಆಯೋಜಿಸುತ್ತಿದ್ದ ಈ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸಬೇಕು ಹಾಗೂ ನೀಟ್‌ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಬಲವಾಗಿ ಒತ್ತಾಯಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ.

ಹೀಗೆ ಮಾಡುವುದರಿಂದ, ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಬಹುದು ಹಾಗೂ ವಿದ್ಯಾರ್ಥಿಗಳಲ್ಲಿ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!