ಮುಸ್ಲಿಮರ 2ಬಿ ಮೀಸಲಾತಿ ರದ್ದು: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದಲ್ಲಿ ಮುಸ್ಲಿಂಮರಿಗೆ ನೀಡಲಾಗಿದ್ದ ಪ್ರವರ್ಗ 2ಡಿ ಅಡಿಯಲ್ಲಿ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (supreme court)​ ಗುರುವಾರ ಸಮ್ಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್​ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್​ ನರಸಿಂಹ, ಜೆ.ಪಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಹಿರಿಯ ವಕೀಲ ಕಪಿಲ್​ ಸಿಬಲ್​ ಅವರ ಸಲ್ಲಿಕೆಗಳನ್ನು ಪ್ರಸ್ತಾಪಿಸಲಾಗಿದೆ. ನಾನು ನಿನ್ನೆ ನ್ಯಾಯಾಲದಲ್ಲಿ ಈ ಕುರಿತು ಪ್ರಸ್ತಾಪಿಸಿದೆ. ಇದು ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವುದಕ್ಕೆ ವಿರುದ್ಧವಾಗಿದೆ ಎಂದು ಕಪಿಲ್​ ಸಿಬಲ್​ ಹೇಳಿದ್ದಾರೆ. ಆದರೆ ದೋಷಗಳನ್ನು ಸರಿಪಡಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಅರ್ಜಿಯಲ್ಲಿದ್ದ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ಸಿಬಲ್​ ತಿಳಿಸಿದ್ದು, ವಿಚಾರಣೆಗೆ ಪಟ್ಟಿ ಮಾಡುತ್ತೇವೆ ಎಂದು ಪೀಠ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!