ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್ ನಿಂದ ಎಸಿಬಿ ರದ್ದುಗೊಳಿಸಿದ ಸಂಬಂಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಈ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ನಾಲ್ಕುವಾರಗಳ ಕಾಲ ಅರ್ಜಿಯ ವಿಚಾರಣೆ ಮುಂದೂಡಿಕೆ ಮಾಡಿದೆ.
ಇಂದು ಎಸಿಬಿ ರದ್ದು ಸಂಬಂಧ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಖಾಸಗೀ ಅರ್ಜಿಯನ್ನು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು. ಎಸಿಬಿ ರದ್ದು ಪಡಿಸಿರೋ ಹೈಕೋರ್ಟ್ ಆದೇಶ ಸಂಬಂಧ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ತಿಳಿಸುವಂತೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಅರ್ಜಿಯ ವಿಚಾರಣೆಯನ್ನು ಮುಂದಿನ ನಾಲ್ಕುವಾರಗಳು ಮುಂದೂಡಿದೆ.