Thursday, June 1, 2023

Latest Posts

ಮುಸ್ಲಿಂ ಮೀಸಲಾತಿ ರದ್ದು: ರಾಜಕೀಯ ಹೇಳಿಕೆಗಳ ಕುರಿತು ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರಕಾರ ಮುಸ್ಲಿಮರಿಗೆ ನೀಡಲಾಗಿದ್ದ 4% ಒಬಿಸಿ (OBC) ಮೀಸಲಾತಿ (Reservation) ರದ್ದು ಪಡಿಸಿರುವ ಆದೇಶದ ಕುರಿತು ನೀಡುತ್ತಿರುವ ರಾಜಕೀಯ ಹೇಳಿಕೆಗಳನ್ನು ಸುಪ್ರೀಂ ಕೋರ್ಟ್ (Supreme Court) ಗಂಭೀರವಾಗಿ ಪರಿಗಣಿಸಿದೆ.

ಈ ಕುರಿತ ವಿಚಾರಣೆ ನ್ಯಾಯಾಲಯದಲ್ಲಿರುವಾಗ ಈ ಬಗ್ಗೆ ಮಾತನಾಡುವಾಗ ಜಾಗೃತೆವಹಿಸಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ (Karnataka Government) ಆದೇಶವನ್ನು ನ್ಯಾ. ಕೆಎಂ ಜೋಸೆಫ್‌, ಬಿವಿ ನಾಗರತ್ನ, ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ನ್ಯಾಯಾಂಗದ ವಿಷಯಗಳ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡಬಾರದು. ರಾಜಕೀಯಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲ ದುಶ್ಯಂತ್ ದವೆ, ಪ್ರತಿ ದಿನ ಗೃಹ ಸಚಿವ (Home Minister) ಅಮಿತ್ ಶಾ (Amit Shah) ಅವರು ಮೀಸಲಾತಿ ರದ್ದುಗೊಳಿಸಿದ್ದರ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಧರ್ಮದ ಆಧಾರದಲ್ಲಿ ನೀಡುವ ಮೀಸಲಾತಿಯನ್ನು ಯಾರು ವಿರೋಧಿಸುತ್ತಾರೋ ಅವರು ಸಮರ್ಥಿಸಿಕೊಳ್ಳುತ್ತಾರೆ ಎಂದು ವಾದಿಸಿದರು. ಈ ವೇಳೆ ನ್ಯಾಯಮೂರ್ತಿ ಬಿವಿ ನಾಗರತ್ನ, ಪ್ರಕರಣ ನ್ಯಾಯಾಲಯದಲ್ಲಿರುವಾಗ ಸರ್ಕಾರದ ವ್ಯಕ್ತಿಗಳು ಯಾವುದೇ ಹೇಳಿಕೆ ನೀಡಬಾರದು. ಮಾತನಾಡುವಾಗ ಜಾಗೃತೆವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದ ಕೋರ್ಟ್‌ ಮುಂದಿನ ಆದೇಶದವರೆಗೂ ಹಳೆಯ ಮೀಸಲಾತಿಯನ್ನು ಮುಂದುವರಿಸುವಂತೆ ಆದೇಶಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!