ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಮುಸ್ಲಿಂ ಧರ್ಮಗುರು ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದು, ಎಫ್ಐಆರ್ ದಾಖಲಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಓಲ್ಡ್ ಸಿಟಿಯ ಮುಸ್ಲಿಂ ಧರ್ಮಗುರು ಅಬ್ದುಲ್ ಹಮೀದ್ ಮೊಹಮ್ಮದ್ ಸಲುಮುಲ್ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ.
ಕೊರೋನಾ ಕಾರಣದಿಂದ ಅಂತ್ಯಕ್ರಿಯೆಯಲ್ಲಿ ಹೆಚ್ಚು ಜನ ಪಾಲ್ಗೊಳ್ಳುವಂತೆ ಇರಲಿಲ್ಲ.
ಆದರೂ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದು, ಎಫ್ಐಆರ್ ದಾಖಲಾಗಿದೆ. ಸಾರ್ವಜನಿಕರ ದರ್ಶನಕ್ಕೆ ಮೃತದೇಹವನ್ನು ಮಸೀದಿಯಲ್ಲಿ ಇಟ್ಟಿದ್ದು, ನಂತರ ಪ್ರಮುಖ ಬೀದಿಗಳಲ್ಲಿ ಶವಯಾತ್ರೆ ನಡೆಸಲಾಗಿದೆ. ಈ ವೇಳೆ ಅತೀ ಹೆಚ್ಚು ಜನ ಪಾಲ್ಗೊಂಡಿದ್ದು ಮಾಸ್ಕ್ ಕೂಡ ಧರಿಸಿಲ್ಲ.ವಿಡಿಯೋಗಳ ಮೂಲಕ ಪೊಲೀಸರು ಎಲ್ಲರನ್ನೂ ಪತ್ತೆಹಚ್ಚಲಿದ್ದಾರೆ.