Saturday, August 13, 2022

Latest Posts

ನಿಫಾ ವೈರಸ್ ಬಗ್ಗೆ ರಾಜ್ಯದಲ್ಲೂ ಕಟ್ಟೆಚ್ಚರ: ಸಿಎಂ ಬಸವರಾಜ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚುತ್ತಿದ್ದು, ರಾಜ್ಯದಲ್ಲೂ ನಿಫಾ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚಾಗಿದೆ. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಕೇರಳದಿಂದ ಬರುವವರಿಗೆ ತಪಾಸಣೆ ನಡೆಸಲಾಗುತ್ತದೆ. ಕೋವಿಡ್ ಜೊತೆಗೆ ನಿಫಾ ಬಗ್ಗೆಯೂ ತೀವ್ರ ನಿಗಾ ಇಡಲಾಗಿದೆ ಎಂದಿದ್ದಾರೆ. ಮುಂದೆ ಇನ್ನಷ್ಟು ಬಿಗಿಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss