spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ, 2 ವರ್ಷ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು

- Advertisement -Nitte

ಹೊಸ ದಿಗಂತ ವರದಿ,  ವಿಜಯಪುರ:

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಾನ್ನಾಳ ಗ್ರಾಮದ ಜಟ್ಟೆಪ್ಪ ದೇವೇಂದ್ರಪ್ಪ ಚಲವಾದಿ ಶಿಕ್ಷೆಗೊಳಗಾದ ಆರೋಪಿ.

ಈತ 17 ವರ್ಷದ ಬಾಲಕಿಯನ್ನು ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಾಟಕವಾಡಿ, ಬಾಲಕಿಗೆ ಕಿರುಕುಳ ನೀಡುತ್ತಿದ್ದ. ಅಲ್ಲದೆ ಬಾಲಕಿಯನ್ನು ಪುಸಲಾಯಿಸಿ ವಿಜಯಪುರ, ಗುಡ್ಡಾಪುರ ಹಾಗೂ ಕಲಬುರಗಿ ಜಿಲ್ಲೆಯ ಶಹಾಪುರಕ್ಕೆ ಕರೆದು ಕೊಂಡು ಹೋಗಿ, ಶಹಾಪುರದ ಲಾಡ್ಜವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಹಿನ್ನೆಲೆ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಸವಿತಾಕುಮಾರಿ ಎನ್. ಅವರು, ಆರೋಪಿ ಜೆಟ್ಟೆಪ್ಪ ಚಲವಾದಿ ಈತನಿಗೆ 2 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss