ಹೊಸದಿಂಗತ ಡಿಜಿಟಲ್ ಡೆಸ್ಕ್:
ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಅಯೋಧ್ಯೆ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸದಿರುವ ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.
ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದುಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿ.ಎಸ್. ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ಸಿಗರು ಯಾಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.