ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಶನಿವಾರ ರಾತ್ರಿ 10:42 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೈಡ್ರಾಲಿಕ್ ವೈಫಲ್ಯದಿಂದಾಗಿ 155 ಪ್ರಯಾಣಿಕರಿದ್ದ ವಿಮಾನವು ರಾತ್ರಿ 10:42 ಕ್ಕೆ ದೆಹಲಿಗೆ ಬಂದಿಳಿಯಿತು.
ಇತ್ತೀಚೆಗೆ ವಿಮಾನಗಳ ತುರ್ತು ಭೂಸ್ಪರ್ಶ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಎರಡು ವಾರಗಳ ಹಿಂದೆ, ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವು ಪಕ್ಷಿಗಳ ಬಡಿತದಿಂದಾಗಿ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಆಗಸ್ಟ್‌ನಲ್ಲಿ ಪ್ರಯಾಣಿಕರ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಮತ್ತೊಂದು ಇಂಡಿಗೋ ವಿಮಾನವು ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.